Haridasa Sahitya — Vyasadasa
Harikathamritasara 15 - 15. Shwaasa sandhi
ಹರಿಕಥಾಮೃತಸಾರ 15 - ಶ್ವಾಸ ಸಂಧಿ
Composer: Jagannatha Dasaru · Deity: Hari / Krishna · Genre: Philosophy
Kannada lyrics
ಹರಿಕಥಾಮೃತಸಾರ ಗುರುಗಳ ಕರುಣದಿಂದಾಪನಿತು ಕೇಳುವೆ ಪರಮ ಭಗವದ್ಭಕ್ತರು ಇದನಾದರದಿ ಕೇಳುವುದು|| ಭಾರತೀಶನು ಘಳಿಗೆಯೊಳು ಮುನ್ನೂರ ಅರವತ್ತು ಸುರ ಜಪಗಳ ತಾ ರಚಿಸುವನು ಸರ್ವ ಜೀವರೊಳಿದ್ದು ಬೇಸರದೆ ಕಾರುಣಿಕ ಅವರವರ ಸಾಧನ ಪೂರೈಸಿ ಭೂ ಸ್ವರ್ಗ ನರಕವ ಸೇರಿಸುವ ಸರ್ವಜ್ಞ ಸಕಲೇಷ್ಟ ಪ್ರದಾಯಕನು||1|| ತಾಸಿಗೆ ಒಂಭೈನೂರು ಶ್ವಾಸೋಚ್ಚಾಸಗಳ ನಡೆಸುತಲಿ ಚೇತನ ರಾಶಿಯೊಳು ಹಗಲಿರುಳು ಜಾಗೃತನಾಗಿ ನಿತ್ಯದಲಿ ಈ ಸುಮನಸೋತ್ತಂಸ ಲೇಶ ಆಯಾಸವಿಲ್ಲದೆ ಪೋಷಿಸುತ ಮೂಲೇಶನ ಅಂಘ್ರಿ ಸರೋಜ ಮೂಲದಲಿಪ್ಪ ಕಾಣಿಸದೆ||2|| ಅರಿವುದೊಂದು ಯಾಮದೊಳು ಶ್ವಾಸಗಳು ಎರಡು ಸಾವಿರದ ಏಳು ನೂರನು ಶರ ಸಹಸ್ರದ ಮೇಲೆ ನಾನೂರು ಅಹವು ದ್ವಿತೀಯಕ್ಕೆ ಮರಳಿ ಯಾಮತ್ರಯ…
Transliteration
harikathAmRutasAra gurugaLa karuNadindApanitu kELuve parama BagavadBaktaru idanAdaradi kELuvudu|| BAratISanu GaLigeyoLu munnUra aravattu sura japagaLa tA racisuvanu sarva jIvaroLiddu bEsarade kAruNika avaravara sAdhana pUraisi BU svarga narakava sErisuva sarvaj~ja sakalEShTa pradAyakanu||1|| tAsige oMBainUru SvAsOccAsagaLa naDesutali cEtana rASiyoLu hagaliruLu jAgRutanAgi nityadali I sumanasOttaMs…