Haridasa Sahitya — Vyasadasa

Harikathamritasara 16 - 16. Dhatthasvathanthriya sandhi

ಹರಿಕಥಾಮೃತಸಾರ 16 - ದತ್ತಸ್ವಾತಂತ್ರ್ಯ ಸಂಧಿ

Composer: Jagannatha Dasaru · Deity: Hari / Krishna · Genre: Philosophy

Kannada lyrics

ಹರಿಕಥಾಮೃತಸಾರ ಗುರುಗಳ ಕರುಣದಿಂದಾಪನಿತು ಕೇಳುವೆ| ಪರಮ ಭಗವದ್ಭಕ್ತರು ಇದನಾದರದಿ ಕೇಳುವುದು|| ಕಾರುಣಿಕ ಹರಿ ತನ್ನೊಳಿಪ್ಪ ಅಪಾರ ಸ್ವಾತಂತ್ರ್ಯ ಗುಣವ ನಾನೂರು ತೆಗೆದು ಸಪಾದ ಆರೊಂದಧಿಕ ಅರವತ್ತು ನಾರಿಗಿತ್ತ ದ್ವಿ ಷೋಡಶ ಅಧಿಕ ನೂರು ಪಾದತ್ರಯವ ತನ್ನ ಶರೀರದೊಳಗೆ ಈಪರಿ ವಿಭಾಗವ ಮಾಡಿ ತ್ರಿಪದಾಹ್ವ||1|| ಸತ್ಯ ಲೋಕಾಧಿಪನೊಳಗೆ ಐವತ್ತೆರೆಡು ಪವಮಾನನೊಳು ನಾಲ್ವತ್ತು ಮೇಲೆಂಟು ಅಧಿಕ ಶಿವನೊಳಗಿಟ್ಟನಿಪ್ಪತ್ತು ಚಿತ್ತಜ ಇಂದ್ರರೊಳು ಐದಧಿಕ ದಶ ತತ್ವಮಾನಿಗಳು ಎನಿಪ ಸುರರೊಳು ಹತ್ತು ಈರೈದು ಅಖಿಳ ಜೀವರೊಳಿಟ್ಟ ನಿರವದ್ಯ||2|| ಕಲಿ ಮೊದಲುಗೊಂಡ ಅಖಿಳ ದಾನವರೊಳಗೆ ನಾಲ್ವತ್ತೈದು ಈ ಪರಿ ತಿಳಿದು ಉಪಾಸನೆ ಮಾಡು ಮರೆಯದೆ ಪರಮ ಭ…

Transliteration

harikathAmRutasAra gurugaLa karuNadindApanitu kELuve| parama BagavadBaktaru idanAdaradi kELuvudu|| kAruNika hari tannoLippa apAra svAtantrya guNava nAnUru tegedu sapAda Arondadhika aravattu nArigitta dvi ShODaSa adhika nUru pAdatrayava tanna SarIradoLage Ipari viBAgava mADi tripadAhva||1|| satya lOkAdhipanoLage aivattereDu pavamAnanoLu nAlvattu mEleMTu adhika SivanoLagiTTanippattu cittaja indraroL…