Haridasa Sahitya — Vyasadasa

Harikathamritasara 2 - Karuna sandhi

ಹರಿಕಥಾಮೃತಸಾರ 2 - ಕರುಣಾ ಸಂಧಿ

Composer: Jagannatha Dasaru · Deity: Hari / Krishna · Genre: Philosophy

Kannada lyrics

ಹರಿಕಥಾಮೃತಸಾರ ಗುರುಗಳ ಕರುಣದಿಂದಾಪನಿತು ಕೇಳುವೆ ಪರಮ ಭಗವದ್ಭಕ್ತರು ಇದನಾದರದಿ ಕೇಳುವುದು|| ಶ್ರವಣ ಮನಕಾನಂದವೀವುದು ಭವಜನಿತ ದುಃಖಗಳ ಕಳೆವುದು ವಿವಿಧ ಭೋಗಗಳು ಇಹಪರಂಗಳಲಿ ಇತ್ತು ಸಲಹುವುದು ಭುವನ ಪಾವನವೆನಿಪ ಲಕ್ಷ್ಮೀ ಧವನ ಮಂಗಳ ಕಥೆಯ ಪರಮ ಉತ್ಸವದಿ ಕಿವಿಗೊಟ್ಟು ಆಲಿಪುದು ಭೂಸುರರು ದಿನದಿನದಿ||1|| ಮಳೆಯ ನೀರು ಓಣಿಯೊಳು ಪರಿಯಲು, ಬಳಸರು ಊರೊಳಗೆ ಇದ್ದ ಜನರು ಆ ಜಲವು ಹೆದ್ದೊರೆಗೂಡೆ ಮಜ್ಜನಪಾನ ಗೈದಪರು ಕಲುಷ ವಚನಗಳ ಆದಡೆಯು, ಬಾಂಬೊಳೆಯ ಪೆತ್ತನ ಪಾದ ಮಹಿಮ ಆ ಜಲದಿ ಪೊಕ್ಕದರಿಂದ ಮಾಣ್ದಪರೆ ಮಹೀಸುರರು||2|| ಶೃತಿತತಿಗಳ ಅಭಿಮಾನಿ ಲಕ್ಷ್ಮೀಸ್ತುತಿಗಳಿಗೆ ಗೋಚರಿಸದ ಅಪ್ರತಿಹತ ಮಹೈಶ್ವರ್ಯಾದಿ ಅಖಿಲ ಸದ್ಗುಣ ಗಣಾ…

Transliteration

harikathAmRutasAra gurugaLa karuNadindApanitu kELuve parama BagavadBaktaru idanAdaradi kELuvudu|| SravaNa manakAnandavIvudu Bavajanita duHKagaLa kaLevudu vividha BOgagaLu ihaparangaLali ittu salahuvudu Buvana pAvanavenipa lakShmI dhavana mangaLa katheya parama utsavadi kivigoTTu Alipudu BUsuraru dinadinadi||1|| maLeya nIru ONiyoLu pariyalu, baLasaru UroLage idda janaru A jalavu heddoregUDe majjana…