Haridasa Sahitya — Vyasadasa

Harikathamritasara 3 - Vyapthi sandhi

ಹರಿಕಥಾಮೃತಸಾರ 3 - ವ್ಯಾಪ್ತಿ ಸಂಧಿ

Composer: Jagannatha Dasaru · Deity: Hari / Krishna · Genre: Philosophy

Kannada lyrics

ಹರಿಕಥಾಮೃತಸಾರ ಗುರುಗಳ ಕರುಣದಿಂದಾಪನಿತು ಕೇಳುವೆ ಪರಮ ಭಗವದ್ಭಕ್ತರು ಇದನಾದರದಿ ಕೇಳುವುದು|| ಪುರುಷರೂಪತ್ರಯ ಪುರಾಣ ಪುರುಷ ಪುರುಷೋತ್ತಮ ಕ್ಷರಾಕ್ಷರ ಪುರುಷ ಪೂಜಿತ ಪಾದ ಪೂರ್ಣಾನಂದ ಜ್ಞಾನಮಯ ಪುರುಷಸೂಕ್ತ ಸುಮೇಯ ತತ್ತತ್ ಪುರುಷ ಹೃತ್ಪುಷ್ಕರ ನಿಲಯ ಮಹಾಪುರುಷ ಅಜಾಂಡ ಅಂತರದಿ ಬಹಿರದಿ ವ್ಯಾಪ್ತ ನಿರ್ಲಿಪ್ತ||1|| ಸ್ತ್ರೀ ನಪುಂಸಕ ಪುರುಷ ಭೂ ಸಲಿಲ ಅನಲ ಗಗನ ಮನ ಶಶಿ ಭಾನು ಕಾಲ ಗುಣ ಪ್ರಕೃತಿಯೊಳಗೆ ಒಂದು ತಾನಲ್ಲ ಏನು ಇವನ ಮಹಾಮಹಿಮೆ ಕಡೆಗಾಣರು ಅಜಭವ ಶಕ್ರ ಮುಖರು ನಿಧಾನಿಸಲು ಮಾನವರಿಗೆ ಅಳವಡುವುದೇ ವಿಚಾರಿಸಲು||2|| ಗಂಧ ರಸರೂಪ ಸ್ಪರ್ಶ ಶಬ್ದ ಒಂದು ತಾನಲ್ಲ ಅದರದರ ಪೆಸರಿಂದ ಕರೆಸುತ ಜೀವರಿಗೆ ತರ್ಪಕನು ತಾನಾಗಿ…

Transliteration

puruSharUpatraya purANa puruSha puruShOttama kSharAkShara puruSha pUjita pAda pUrNAnaMda j~jAnamaya puruShasUkta sumEya tattat puruSha hRutpuShkara nilaya mahApuruSha ajAnDa antaradi bahiradi vyApta nirlipta||1|| strI napuMsaka puruSha BU salila anala gagana mana SaSi BAnu kAla guNa prakRutiyoLage ondu tAnalla Enu ivana mahAmahime kaDegANaru ajaBava Sakra muKaru nidhAnisalu mAnavarige aLavaDuvudE…