Haridasa Sahitya — Vyasadasa
Harikathamritasara 32 - 32. Kaksha taratamya sandhi
ಹರಿಕಥಾಮೃತಸಾರ 32 - ಕಕ್ಷಾ ತಾರತಮ್ಯ ಸಂಧಿ
Composer: Jagannatha Dasaru · Deity: Hari / Krishna · Genre: Philosophy
Kannada lyrics
ಹರಿಕಥಾಮೃತಸಾರ ಗುರುಗಳ ಕರುಣದಿಂದಾಪನಿತು ಕೇಳುವೆ ಪರಮ ಭಗವದ್ಭಕ್ತರು ಇದನಾದರದಿ ಕೇಳುವುದು|| ಶ್ರೀರಮಣ ಸರ್ವೇಶ ಸರ್ವಗ ಸಾರಭೋಕ್ತ ಸ್ವತಂತ್ರ ದೋಷ ವಿದೂರ ಜ್ಞಾನಾನಂದ ಬಲೈಶ್ವರ್ಯ ಸುಖ ಪೂರ್ಣ ಮೂರುಗುಣ ವರ್ಜಿತ ಸಗುಣ ಸಾಕಾರ ವಿಶ್ವ ಸ್ಥಿತಿ ಲಯೋದಯ ಕಾರಣ ಕೃಪಾಸಾಂದ್ರ ನರಹರೆ ಸಲಹೊ ಸಜ್ಜನರ||1|| ನಿತ್ಯ ಮುಕ್ತಳೆ ನಿರ್ವಿಕಾರಳೆ ನಿತ್ಯ ಸುಖ ಸಂಪೂರ್ಣೆ ನಿತ್ಯಾನಿತ್ಯ ಜಗದಾಧಾರೆ ಮುಕ್ತಾಮುಕ್ತ ಗಣ ವಿನುತೆ ಚಿತ್ತೈಸು ಬಿನ್ನಪವ ಶ್ರೀ ಪುರುಷೋತ್ತಮನ ವಕ್ಷೋ ನಿವಾಸಿನಿ ಭೃತ್ಯ ವರ್ಗವ ಕಾಯೆ ತ್ರಿಜಗನ್ಮಾತೆ ವಿಖ್ಯಾತೆ||2|| ರೋಮ ಕೂಪಗಳಲ್ಲಿ ಪೃಥ್ ಪೃಥಕು ಆ ಮಹಾ ಪುರುಷನ ಸ್ವಮೂರ್ತಿ ತಾಮರಸಜಾಂಡಗಳ ತದ್ಗತ ವಿಶ್ವ ರೂಪಗಳ…
Transliteration
harikathAmRutasAra gurugaLa karuNadindApanitu kELuve parama BagavadBaktaru idanAdaradi kELuvudu|| SrIramaNa sarvESa sarvaga sAraBOkta svatantra dOSha vidUra j~jAnAnaMda balaiSvarya suKa pUrNa mUruguNa varjita saguNa sAkAra viSva sthiti layOdaya kAraNa kRupAsAndra narahare salaho sajjanara||1|| nitya muktaLe nirvikAraLe nitya suKa saMpUrNe nityAnitya jagadAdhAre muktAmukta gaNa vinute cittaisu binn…