Haridasa Sahitya — Vyasadasa
Harikathamritasara 4 - Bhojana Sandhi
ಹರಿಕಥಾಮೃತಸಾರ 4 - ಭೋಜನ ಸಂಧಿ
Composer: Jagannatha Dasaru · Deity: Hari / Krishna · Genre: Philosophy
Kannada lyrics
ಹರಿಕಥಾಮೃತಸಾರ ಗುರುಗಳ ಕರುಣದಿಂದಾಪನಿತು ಕೇಳುವೆ ಪರಮ ಭಗವದ್ಭಕ್ತರು ಇದನಾದರದಿ ಕೇಳುವುದು|| ವನಜಾಂಡದೊಳು ಉಳ್ಳ ಅಖಿಳ ಚೇತನರು ಭುಂಜಿಪ ಚತುರವಿಧ ಭೋಜನಪದಾರ್ಥದಿ ಚತುರವಿಧ ರಸರೂಪ ತಾನಾಗಿ ಮನಕೆ ಬಂದಂತೆ ಉಂಡು ಉಣಿಸಿ ಸಂಹನನಕೆ ಉಪಚಯ ಕರುಣಕೆ ಆನಂದ ಅನಿಮಿಷರಿಗೆ ಆತ್ಮ ಪ್ರದರ್ಶನ ಸುಖವನೀವ ಹರಿ||1|| ನೀಡದಂದದಲೆ ಇಪ್ಪ ಲಿಂಗಕೆ ಷೋಡಶ ಆತ್ಮಕ ರಸ ವಿಭಾಗವ ಮಾಡಿ ಷೋಡಶ ಕಲೆಗಳಿಗೆ ಉಪಚಯಗಳನೆ ಕೊಡುತ ಕ್ರೋಡ ಎಪ್ಪತ್ತೆರಡು ಸಾವಿರ ನಾಡಿಗತ ದೇವತೆಗಳೊಳಗೆ ಇದ್ದಾಡುತ ಆನಂದಾತ್ಮ ಚರಿಸುವ ಲೋಕದೊಳು ತಾನು||2|| ವಾರಿವಾಚ್ಯನು ವಾರಿಯೊಳಗಿದ್ದು ಆರು ರಸವೆಂದೆನಿಸಿ ಮೂವತ್ತಾರು ಸಾವಿರ ಸ್ತ್ರೀ ಪುರುಷನಾಡಿಯಲಿ ತದ್ರೂಪ ಧಾರಕನು…
Transliteration
harikathAmRutasAra gurugaLa karuNadindApanitu kELuve parama BagavadBaktaru idanAdaradi kELuvudu|| vanajAnDadoLu uLLa aKiLa cEtanaru Bunjipa caturavidha BOjanapadArthadi caturavidha rasarUpa tAnAgi manake bandante unDu uNisi saMhananake upacaya karuNake Ananda animiSharige Atma pradarSana suKavanIva hari||1|| nIDadandadale ippa liMgake ShODaSa Atmaka rasa viBAgava mADi ShODaSa kalegaLige upacayagaL…