Haridasa Sahitya — Vyasadasa

Harikathamritasara 9 - varnaprakriya sandhi

ಹರಿಕಥಾಮೃತಸಾರ 9 - ವರ್ಣಪ್ರಕ್ರಿಯಾ ಸಂಧಿ

Composer: Jagannatha Dasaru · Deity: Hari / Krishna · Genre: Philosophy

Kannada lyrics

ಹರಿಕಥಾಮೃತಸಾರ ಗುರುಗಳ ಕರುಣದಿಂದಾಪನಿತು ಕೇಳುವೆ ಪರಮ ಭಗವದ್ಭಕ್ತರು ಇದನಾದರದಿ ಕೇಳುವುದು|| ಹರಿಯೆ ಪಂಚಾಶದ್ವರ್ಣ ಸುಸ್ವರವು ಉದಾತ್ತಾನುದಾತ್ತ ಪ್ರಚಯ ಸ್ವರಿತ ಸಂಧಿ ವಿಸರ್ಗ ಬಿಂದುಗಳೊಳಗೆ ತದ್ವಾಚ್ಯ ಇರುವ ತನ್ನಾಮ ರೂಪಗಳರಿತು ಉಪಾಸನೆಗೈವರು ಇಳೆಯೊಳು ಸುರರೆ ಸರಿ ನರರಲ್ಲ ಅವರು ಆಡುವುದೇ ವೇದಾರ್ಥ||1|| ಈಶನಲಿ ವಿಜ್ಞಾನ ಭಗವದ್ದಾಸರಲಿ ಸದ್ಭಕ್ತಿ ವಿಷಯ ನಿರಾಶೆ ಮಿಥ್ಯಾ ವಾದದಲಿ ಪ್ರದ್ವೇಷ ನಿತ್ಯದಲಿ ಈ ಸಮಸ್ತ ಪ್ರಾಣಿಗಳಲಿ ರಮೇಶನು ಇಹನೆಂದು ಅರಿದು ಅವರ ಅಭಿಲಾಷೆಗಳ ಪೂರೈಸುವುದೆ ಮಹಾಯಜ್ಞೆ ಹರಿಪೂಜೆ||2|| ತ್ರಿದಶ ಏಕಾತ್ಮಕನು ಎನಿಸಿ ಭೂ ಉದಕ ಶಿಖಿಯೊಳು ಹತ್ತು ಕರಣದಿ ಅಧಿಪರು ಎನಿಸುವ ಮುಖ್ಯ ಪ್ರಾಣ ಆದಿತ್ಯ…

Transliteration

harikathAmRutasAra gurugaLa karuNadindApanitu kELuve parama BagavadBaktaru idanAdaradi kELuvudu|| hariye pancASadvarNa susvaravu udAttAnudAtta pracaya svarita sandhi visarga bindugaLoLage tadvAcya iruva tannAma rUpagaLaritu upAsanegaivaru iLeyoLu surare sari nararalla avaru ADuvudE vEdArtha||1|| ISanali vij~jAna BagavaddAsarali sadBakti viShaya nirASe mithyA vAdadali pradvESha nityadali I samasta…