Haridasa Sahitya — Vyasadasa
Adidano ranga adbutadindali
ಆಡಿದನೋ ರಂಗ ಅದ್ಭುತದಿಂದಲಿ
Composer: Purandara Dasaru · Deity: Krishna / Govinda / Mukunda · Genre: Bhakti
Kannada lyrics
ಆಡಿದನೋ ರಂಗ ಅದ್ಭುತದಿಂದಲಿ ಕಾಳಿಂಗನ ಫಣೆಯಲಿ ||ಪ|| ಪಾಡಿದವರಿಗೆ ಬೇಡಿದ ವರಗಳ ನೀಡುತಲಿ ದಯ ಮಾಡುತಲಿ ನಲಿದಾಡುತಲಿ ಬೆಣ್ಣೆ ಬೇಡುತಲಿ ಕೃಷ್ಣ ||ಅ.ಪ|| ಅಂಬುರುಹೋದ್ಭವ ಅಖಿಳ ಸುರರು ಕೂಡಿ ಅಂಬರದಲಿ ನಿಂತು ಅವರ ಸ್ತುತಿಸೆ ರಂಭೆ ಊರ್ವಶಿ ರಮಣಿಯರೆಲ್ಲರು ಚಂದದಿಂ ಭರತನಾಟ್ಯವ ನಟಿಸೆ ಝಂತಟ ತಕಧಿಮಿ ತಧಿಗಿಣಿ ತೋಂ ಎಂದು ಝಂಪೆ ತಾಳದಿ ತುಂಬುರುನೊಪ್ಪಿಸೆ ಧಾ ಮ ಪ ಧ ಸ ರೀ ಎಂದು ಧ್ವನಿಯಿಂದ ನಾರದ ತುಂಬುರು ಗಾನವ ಮಾಡಲು ನಂದಿಯು ಮದ್ದಲೆ ಚೆಂದದಿ ಹಾಕಲು ||೧|| ಫಣವ ಮೆಟ್ಟಿ ಬಾಲವ ಕೈಯಲಿ ಪಿಡಿದು ಫಳಫಳಿಸುತ್ತ ನಾಟ್ಯವನಾಡೆ ಚಂದ್ರಮಂಡಲದಂತೆ ಪೊಳೆಯುವ ಮುಖದೊಳು ಚಲಿಸುವ ನೀಲಕೇಶಗಳಾಡೆ ಕಾಲಲಂದುಗೆ ಗೆಜ್ಜೆ ಘಲು ಘಲು ಘಲು…
Transliteration
Adidano ranga adbutadindali Kalingana paneyali ||pa|| Padidavarige bedida varagala Nidutali daya madutali Nalidadutali benne bedutali krushna ||a.pa|| Amburuhodbava akila suraru kudi Ambaradali nintu avara stutise Rambe urvasi ramaniyarellaru Chandadim baratanatyava natise Jantata takadhimi tadhigini tom endu Jampe taladi tumburunoppise Dha ma pa dha sa ri endu dhvaniyinda narada Tumburu ganava ma…