Haridasa Sahitya — Vyasadasa
Badukidenu badukidenu bhava enage hingitu
ಬದುಕಿದೆನು ಬದುಕಿದೆನು ಭವ ಎನಗೆ ಹಿಂಗಿತು
Composer: Kanakadasaru · Deity: Hari · Genre: Philosophy
Kannada lyrics
ಬದುಕಿದೆನು ಬದುಕಿದೆನು ಭವ ಎನಗೆ ಹಿಂಗಿತು ಪದುಮನಾಭನ ಪಾದದೊಲುಮೆ ಎನಗಾಯಿತು ಹರಿತೀರ್ಥ ಪ್ರಸಾದ ಎನ್ನ ಜಿಹ್ವೆಗೊದಗಿತುಹರಿಯ ನಾಮಾಮೃತ ಕಿವಿಗೊದಗಿತು ಹರಿಯ ದಾಸರು ಎನ್ನ ಬಂಧು ಬಳಗವಾದರುಹರಿಯ ಶ್ರೀಮುದ್ರೆ ಆಭರಣವಾಯ್ತು ||1|| ಮುಕುತರಾದರು ಎನ್ನ ನೂರೊಂದು ಕುಲದವರುಮುಕುತಿ ಮಾರ್ಗಕೆ ಯೋಗ್ಯ ನಾನಾದೆನೊ ಅಕಳಂಕ ಶ್ರೀಹರಿ ಭಕುತಿಗೆನ್ನ ಮನ ಬೆಳೆದುರುಕುಮಿಣಿಯರಸ ಕೈವಶನಾದನೆನಗೆ ||2|| ಇಂದೆನ್ನ ಜೀವಕ್ಕು ಸಕಲ ಸಂಪದವಾಯ್ತುಮುಂದೆನ್ನ ಜನ್ಮ ಸಫಲವಾಯಿತು ತಂದೆ ಶ್ರೀ ಕಾಗಿನೆಲೆಯಾದಿಕೇಶವರಾಯಬಂದೆನ್ನ ಹೃದಯದಲಿ ನೆಲೆಯಾಗಿ ನಿಂತ ||3||
Transliteration
Badukidenu badukidenu bhava enage hingitu padumanabhana padadolime enagayitu Haritirtha prasada jihvege dorakitu hariya namamrutavu kivigodagitu hariya dasaru enna bandhugaladaru hariya shrimudre enagabharanavayitu Mukutharaadharu yenna noorondu kooraravaru Mukuthi maargakke yogya naanenadheno Akalanga sri hariya bakuthige manaveladhu Rukuminiyarara kaivasharu adhenege Indenna jivakke sakala sampa…