Haridasa Sahitya — Vyasadasa

Dayavirali ennalli dharanidharane

ದಯವಿರಲಿ ಎನ್ನಲ್ಲಿ ಧರಣಿಧರನೆ

Composer: Vijaya Dasaru · Deity: Hari · Genre: Bhakti

Kannada lyrics

ದಯವಿರಲಿ ಎನ್ನಲ್ಲಿ ಧರಣಿಧರನೆ ಭಯಗಳನು ಪೋಗಾಡು ಭಕ್ತಜನ ಪ್ರೀಯಾ ||pa|| ಎರಗಿಸುವದು ಚರಣದಲಿ ಶಿರಸು ಎರಗಲಿ ನಿನ್ನ ಧ್ಯಾನದಲಿ ಮನಸು ಎರವೆರವು ಮಾಡದಲೆ ನಿನ್ನ ನಾಮಾಮೃತವ ಎರದು ಸಾಕುವದು ಸಂತತ ಎನ್ನ ಬಿಡದೆ ||1|| ಮತಿಗೆಟ್ಟ ಮಾನವಗೆ ಗತಿ ನೀನೆ ಆವಾವಾ ಶ್ರುತಿಗಳೊಳು ಪೇಳುತಿದೆ ವರದೊರದೂ ಕ್ಷಿತಿಯೊಳಗೆ ರವಿ ಶಶಿಯ ಗತಿ ತಪ್ಪಿದರೇನು ಪತಿತ ಪಾವನ ನಿನ್ನ ಕೃಪೆಗೆ ಎಣೆಗಾಣೆ ||2|| ಕೊಡುವಲ್ಲಿ ಕೊಳುವಲ್ಲಿ ಯಡಿಯಡಿಗೆ ಭಕುತಿರಸ ಕುಡಿಸುವಲಿ ಕಲಕಾಲ ಸಂತೋಷವ ಬಡಿಸಿ ಪೊರೆವಲ್ಲಿ ನಿನಗಾವಲ್ಲಿ ಸರಿಗಾಣೆ ಮೃಡನೊಡಿಯಾ ಸಿರಿ ವಿಜಯವಿಠ್ಠಲ ತಿರುಮಲೇಶಾ ||3|||

Transliteration

Dayavirali ennalli dharanidharane Bayagalanu pogadu Baktajana priya ||pa|| Eragisuvadu caranadali Sirasu Eragali ninna dhyanadali manasu Eraveravu madadale ninna namamrutava Eradu sakuvadu santata enna bidade ||1|| Matigetta manavage gati nine avava Srutigalolu pelutide varadoradu Kshitiyolage ravi sasiya gati tappidarenu Patita pavana ninna krupege enegane ||2|| Koduvalli koluvalli yadiyadige Bak…