Haridasa Sahitya — Vyasadasa

Hari namadaraginiyu

ಹರಿನಾಮದರಗಿಣಿಯು ಹಾರುತಿದೆ

Composer: Purandara Dasaru · Deity: Hari · Genre: Bhakti

Kannada lyrics

ಹರಿನಾಮದರಗಿಣಿಯು ಹಾರುತಿದೆ ಜಗದಿ ಪರಮ ಭಾಗವತರು ಬಲೆಯ ಬೀಸುವರು ||ಪ|| ಕೋಪವೆಂಬ ಮಾರ್ಜಾಲ ಕಂಡರೆ ನುಂಗುವುದು ತಾಪವೆಂಬುವ ಹುಲಿಯ ಕೊಂಡೊಯ್ವುದು ಕಾಪಾಡಲದನೊಯ್ದು ಹೃದಯದೊಳಗಿಂಬಿಟ್ಟು ಆಪತ್ತಿಗೊದಗುವುದು ಆ ಮುದ್ದು ಅರಗಿಣಿಯು ||೧|| ದಾರಿಯಲಿ ನಡೆವಾಗ ಚೋರರುಪಟಳವಿಲ್ಲ ಮಾರಿ ಬಂದರೆ ಅದನು ಹೊಡೆದು ನೂಕುವುದು ಕ್ರೂರ ಯಮಭಟರನು ಮೂಗು ರೆಕ್ಕಿಲಿ ಬಡಿದು ದಾರಿ ತೋರುವುದು ಮುರಾರಿ ಪಟ್ಟಣಕೆ ||೨|| ಎಷ್ಟು ವರ್ಣಿಸಲಿ ನಾ ಈ ಮುದ್ದು ಅರಗಿಣಿಯ ಹೊಟ್ಟೆಯೊಳಗೀರೇಳು ಜಗವನಿಂಬಿಟ್ಟು ಸೃಷ್ಟೀಶ ಪುರಂದರ ವಿಠಲನ ನೆನೆ ನೆನೆದು ಮುಟ್ಟಿ ಭಜಿಸುವುದು ಈ ಮುದ್ದು ಅರಗಿಣಿಯು ||೩||

Transliteration

Harinamadaraginiyu harutide jagadi Parama bagavataru baleya bisuvaru ||pa|| Kopavemba marjala kandare nunguvudu Tapavembuva huliya kondoyvudu Kapadaladanoydu hrudayadolagimbittu Apattigodaguvudu A muddu araginiyu ||1|| Dariyali nadevaga chorarupatalavilla Mari bamdare adanu hodedu nukuvudu Krura yamabataranu mugu rekkili badidu Dari toruvudu murari pattanake ||2|| Eshtu varnisali na I muddu aragin…