Haridasa Sahitya — Vyasadasa
Jaya Jayathu Jahnaviye baktha sanjeevi
ಜಯಜಯತು ಜಾಹ್ನವಿಯೆ ಭಕ್ತ ಸಂಜೀವಿ
Composer: Vijaya Dasaru · Deity: Ganga · Genre: Bhakti
Kannada lyrics
ಜಯಜಯತು ಜಾಹ್ನವಿಯೆ ಭಕ್ತ ಸಂಜೀವಿ ಜಯ ಮಂಗಳವನೀಯೆ ಜಯ ನಮ್ಮ ಕಾಯೆ ||pa|| ಕಮಲಜನು ಪಾತ್ರೆಯೊಳು ಧರಿಸಲಾ ಹರಿಪಾದ- ಕಮಲವನು ತೊಳೆಯಲಾವೇಗದಿಂದ ವಿಮಲ ಸಂಗತಿಯಿಂದ ಮಂದಾದಿನಿಯೆನಿಸಿ ಸುಮನ ಸಾವನಿಯಲ್ಲಿ ಮೆರೆದೆ ಸುರನದಿಯೆ||1|| ಧ್ರುವಲೋಕಕಿಳಿದು ಅಮರಾವತಿಯ ಸಾರಿದೆ ರವಿಯಂತೆ ಪೊಳೆಯುತ ಆ ಜನ ಮಧ್ಯದಿಂ ಭುವನದೊಳಗೀರೈದು ನೂರು ಯೋಜನದಗಲ ತವಕದಿಂದಲಿ ಧುಮುಕಿ ಚತುರ ಭಾಗವಾದೆ ||2|| ಶಿವನ ಮಸ್ತಕದಲ್ಲಿ ಶೋಭಿಸುವ ಮಹಮಹಿಮೆ ಭವದೊರೆ ಭಗೀರಥಗೆ ವಲಿದು ಬರುತ ಕವಿ ಜನ್ಹುಮುನಿಯಿಂದ ಪುಟ್ಟಿ ಹಿಮಗಿರಿ ದಾಟಿ ಜವನ ಭಗಿನಿಯ ಕೂಡಿ ಮಣಿಕರ್ಣಿಕೆಯ ನೆರದೆ ||3|| ಅಳಕನಂದನೆ ನಿನ್ನ ಸ್ಮರಣೆ ಮಾಡಿದ ಜನಕೆ ಕುಲಕೋಟಿ ಪಾವನವು ಸಂದೇಹವಿಲ್…
Transliteration
jayajayatu jAhnaviye Bakta saMjIvi jaya mangaLavanIye jaya namma kAye ||pa|| kamalajanu pAtreyoLu dharisalA haripAda- kamalavanu toLeyalAvEgadinda vimala sangatiyinda mandAdiniyenisi sumana sAvaniyalli merede suranadiye||1|| dhruvalOkakiLidu amarAvatiya sAride raviyaMte poLeyuta A jana madhyadiM BuvanadoLagIraidu nUru yOjanadagala tavakadindali dhumuki catura BAgavAde ||2|| Sivana mastakadalli SOB…