Haridasa Sahitya — Vyasadasa

Jayadevi jayadevi jaya pavanagange

ಜಯದೇವಿ ಜಯದೇವಿ ಜಯ ಪಾವನಗಂಗೇ

Composer: Vijaya Dasaru · Deity: Ganga · Genre: Bhakti

Kannada lyrics

ಜಯದೇವಿ ಜಯದೇವಿ ಜಯ ಪಾವನಗಂಗೇ | ಜಯಜಯ ತ್ರಿಪಥಗಾಮಿನಿ ಜಯ ತುಂಗತರಂಗೇ ||ಪ|| ಆದಿಲಿ ಶ್ರೀಹರಿ ಕೋಮಲ ಪದನಖದಿಂದೊಗದು | ಸಾಧಿನಿ ವಾರಿಜಭವನಾ ಕರಪಾತ್ರಕೆ ಬಂದು | ಸಾದರದಿಂದಾಶಿವನ ಕೆಂಜೆಡೆಯೊಳು ನಿಂದು | ಮೇದಿನಿಗಿಳಿದು ನೀಬಂದೆ ಭಗೀರಥನೃಪಗೊಲಿದು ||1|| ಕಾಶಿಪ್ರಯಾಗದಿ ನಿಂದು ಉದ್ದರಿಸುತ ಕೆಲರಾ | ಆಶೆಯ ಪೂರಿಸಲಾಗಿ ದಕ್ಷಿಣ ದಿಶೆದವರಾ | ರಾಶಿಯ ಕನ್ಯಾ ಮೆಟ್ಟಲು ಸುರಗುರು ಗಂಭೀರಾ | ಭಾಶಿಶಿ ತೋರಿದೆ ಬಂದು ಕೃಷ್ಣವೇಣಿಲಿ ಸದರಾ ||2|| ಹರಿಹರ ದೇವರು ದ್ರವರೂಪದಿ ಹರಿವುತಲೀ | ನೆರೆನೀಕೂಡಿದ ಸಂಭ್ರಮ ಏನೆಂದುಸುರಲಿ | ದರುಶನ ಮಾತ್ರದಲಾದೆನು ಮುಕ್ತನು ಭವದಲಿ | ಗುರು ಮಹೀಪತಿಸುತ ಎನ್ನನು ರಕ್ಷಿಸು ಕರುಣದಲಿ ||3|…

Transliteration

Adili srihari komala padanakadindogadu | Sadhini varijabavana karapatrake bandu | Sadaradindasivana kenjedeyolu nindu | Medinigilidu nibande bagirathanrupagolidu ||1|| Kasiprayagadi nindu uddarisuta kelara | Aseya purisalagi dakshina disedavara | Rasiya kanya mettalu suraguru gambira | Basisi toride bandu krushnavenili sadara ||2|| Harihara devaru dravarupadi harivutali | Nerenikudida sambrama Ene…