Haridasa Sahitya — Vyasadasa
Kande kande swamiya
ಕಂಡೆ ಕಂಡೆ ಸ್ವಾಮಿಯ
Composer: Purandara Dasaru · Deity: Srinivasa / Venkatesha · Genre: Bhakti
Kannada lyrics
ಕಂಡೆ ಕಂಡೆ ಸ್ವಾಮಿಯ ಬೇಡಿಕೊಂಡೆ ||ಪ|| ಕಂಡೆ ತಿರುಪತಿ ವೆಂಕಟೇಶನ ಕಾರಣಾತ್ಮಕ ಸಾರ್ವಭೌಮನ ಕಾಮಿತಾರ್ಥಗಳೀವ ದೇವನ ಕರುಣಾನಿಧಿ ಎಂದೆನಿಸಿ ಮೆರೆವನ ||ಅ.ಪ|| ಕೋಟಿಸೂರ್ಯ ಪ್ರಕಾಶವೆನಿಪ ಕಿರೀಟವನು ಮಸ್ತಕದಿ ಕಂಡೆನು ನೋಟಕಾಶ್ಚರ್ಯವಾದ ನಗೆಮುಖನೊಸಲಿನಲಿ ತಿರುಮಣಿಯ ಕಂಡೆನು ಸಾಟಿಯಿಲ್ಲದೆ ಚತುರ ಹಸ್ತದಿ ಶಂಖಚಕ್ರಗದಾಬ್ಜ ಕಂಡೆನು ಬೂಟಕದ ಮಾತಲ್ಲ ಕೇಳಿರೋ ಭೂರಿದೈವರ ಗಂಡನಂಘ್ರಿಯ ||೧|| ತಪ್ಪುಕಾಣಿಕೆ ಕಪ್ಪವನು ಸಮಸ್ತದ್ವೀಪಗಳಿಂದಲಿ ತರಿಸುವ ಉಪ್ಪು ಓಗರಗಳನೆ ಮಾರಿಸಿ ಉಚಿತದಿಂದಲಿ ಹಣವ ಗಳಿಸುವ ಇಪ್ಪತ್ತು ದುಡ್ಡಿಗೆ ಸೇರು ತೀರ್ಥ ಒಪ್ಪದಲಿ ಕ್ರಯ ಮಾಡಿ ಕೊಡಿಸುವ ಸರ್ಪಶಯನ ಸಾರ್ವಭೌಮನ ಅಪ್ಪ ವೆಂಕಟರಮಣನಂಘ್ರಿಯ ||೨||…
Transliteration
Kande kande svamiya bedikonde ||pa|| Kande tirupati venkatesana karanatmaka sarvabaumana Kamitarthagaliva devana karunanidhi endenisi merevana ||a.pa|| Kotisurya prakasavenipa kiritavanu mastakadi kandenu Notakascaryavada nagemukanosalinali tirumaniya kandenu Satiyillade chatura hastadi samkacakragadabja kandenu Butakada matalla keliro buridaivara gandanangriya ||1|| Tappukanike kappavanu samastad…