Haridasa Sahitya — Vyasadasa
Kandha bedovo
ಕಂದಾ ಬೇಡವೊ
Composer: Purandara Dasaru · Deity: Krishna / Govinda / Mukunda · Genre: Bhakti
Kannada lyrics
ಕಂದಾ ಬೇಡವೊ ಮಣ್ಣು ತಿನ್ನ ಬೇಡವೊ ||ಪ|| ಕಂದಾ ಬೇಡವೊ ಮಣ್ಣು ತಿನ್ನಲಿ ಬೇಡವೊ ಸುಂದರಾಂಗನೆ ನಿನಗೆ ಹೊಟ್ಟೆ ನೋಯುವುದಯ್ಯ ||ಅ|| ಬೇಗನೆ ಏಳಯ್ಯ , ಮಣ್ಣಾಟ ಬಿಡೊ ನೀನು ಜೋಗಿ ಬರುತಾನಲ್ಲಿ ಅಂಜಿಸುವುದಕೀಗ || ತಾಯಿ ಮಾತನು ಒತ್ತಿ ಕರದಲಿ ಮಣ್ಣೊತ್ತಿ ಬಾಯಲಿ ಇಟ್ಟನು ಬಾಲಕೃಷ್ಣಯ್ಯನು || ಪೆಟ್ಟು ಕೊಡುವೆ ನಿನಗೆ , ಸಿಟ್ಟು ಬಹಳ ಇದೆ ಮುಟ್ಟಬೇಡೊ ಮಣ್ಣು , ಬೆಣ್ಣೆ ತರುವೆನಯ್ಯ || ಅಮ್ಮಯ್ಯ ಕೇಳೆಲೆ , ಬಾಯಲಿ ಮಣ್ಣಿಲ್ಲ ಗುಮ್ಮನ ಕರೆಬೇಡ , ಸುಮ್ಮನೆ ಇರುತೇನೆ || ಮಗುವೆ ಬಾ ಬಾ ಎಂದು ಬಣ್ಣಿಸಿ ಕರೆದಳು ಮಗುವಿನ ಬಾಯ ಶೋಧಿಸಿದಳು ಬೇಗನೆ || ಬಾಯಲಿ ಕಂಡಳು ಹದಿನಾಲ್ಕು ಲೋಕವ ಕಾಯ ಮರೆತಳಯ್ಯ ಮರುಳಿಗೆ ವಶವಾಗಿ || ಮತ್ತು…
Transliteration
Kanda bedavo mannu tinna bedavo ||pa|| Kanda bedavo mannu tinnali bedavo Sundarangane ninage hotte noyuvudayya ||a|| Begane elayya , mannata bido ninu Jogi barutanalli anjisuvudakiga || Tayi matanu otti karadali mannotti Bayali ittanu balakrushnayyanu || Pettu koduve ninage , sittu bahala ide Muttabedo mannu , benne taruvenayya || Ammayya kelele , bayali mannilla Gummana karebeda , summane irutene…