Haridasa Sahitya — Vyasadasa
Kandu kandu ni enna kai biduvare krushna
ಕಂಡು ಕಂಡು ನೀ ಎನ್ನ ಕೈ ಬಿಡುವರೇ ಕೃಷ್ಣಾ
Composer: Purandara Dasaru · Deity: Krishna / Govinda / Mukunda · Genre: Bhakti
Kannada lyrics
ಕಂಡು ಕಂಡು ನೀ ಎನ್ನ ಕೈ ಬಿಡುವರೇ ಕೃಷ್ಣಾ ।।ಪ॥ ಪುಂಡರೀಕಾಕ್ಷ ಶ್ರೀ ಪುರುಷೋತ್ತಮ ಹರಿ ।।ಅ.ಪ॥ ಬಂಧುಗಳು ಎನಗಿಲ್ಲ ಬದುಕಿನಲಿ ಸುಖವಿಲ್ಲ ನಿಂದೆಯಲಿ ನೊಂದೆನೈ ನೀರಜಾಕ್ಷ ತಂದೆತಾಯಿಯು ನೀನೆ ಬಂಧುಬಳಗವು ನೀನೆ ಎಂದೆಂದಿಗೂ ನಿನ್ನ ನಂಬಿದೆನೋ ಕೃಷ್ಣಾ ।।೧।। ಕ್ಷಣವೊಂದು ಯುಗವಾಗಿ ತೃಣಕಿಂತ ಕಡೆಯಾಗಿ ಎಣಿಸಲಾರದ ಭವದಿ ಕಡುನೊಂದೆ ನಾನು ಸನಕಾದಿ ಮುನಿವಂದ್ಯ ವನಜಸಂಭವ ಜನಕ ಫಣಿಶಾಯಿ ಪ್ರಹ್ಲಾದಗೊಲಿದ ಶ್ರೀಕೃಷ್ಣಾ ।।೨।। ಭಕ್ತವತ್ಸಲನೆಂಬೊ ಬಿರುದು ಪೊತ್ತಮೇಲೆ ಭಕ್ತರಾಧೀನನಾಗಿರಬೇಡವೆ ಮುಕ್ತಿದಾಯಕ ದೇವ ಪುರಂದರವಿಠಲನೆ ಶಕ್ತ ನೀನಹುದೆಂದು ನಂಬಿದೆನೊ ಶ್ರೀಕೃಷ್ಣಾ ।।೩।।
Transliteration
Kandu kandu ni enna kai biduvare krushna ||pa|| Pundarikaksha sri purushottama hari ||a.pa|| Bandhugalu enagilla badukinali sukavilla Nindeyali nondenai nirajaksha Tandetayiyu nine bandhubalagavu nine Endemdigu ninna nambideno krushna ||1|| Kshanavomdu yugavagi trunakinta kadeyagi Enisalarada Bavadi kadunonde nanu Sanakadi munivandya vanajasambava janaka Panisayi prahladagolida srikrushna ||2|| Ba…