Haridasa Sahitya — Vyasadasa
Malagi eddanu ranga
ಮಲಗಿ ಎದ್ದನು ರಂಗ,
Composer: Purandara Dasaru · Deity: Krishna / Govinda / Mukunda · Genre: Bhakti
Kannada lyrics
ಮಲಗಿ ಎದ್ದನು ರಂಗ, ಮಕ್ಕಳ ಮಾಣಿಕ ಕೃಷ್ಣ | ಛಲ ಹಿಡಿದನು ನೋಡೆ ಮೊಲೆಕೊಡೆ ಕೃಷ್ಣಗೆ || ಜಲದೊಳು ತಮನ ಮರ್ದಿಸಿ ಅಂದು ಮತ್ಸ್ಯನಾಗಿ |ಬಲುಗಿರಿಯ ನೆಗಹಿ ಮರೆಮಾಡಿ ಕೂರ್ಮನಾಗಿ || ನೆಲನ ಒಯ್ದವನ ಕೊಲುವೆನೆಂದು ವರಹನಾಗಿ |ಬಲುಭಕ್ತಿಗಾಗಿ ಕಂಬದಿ ನಾರಸಿಂಹನಾಗಿ|| ಚಿಕ್ಕ ರೂಪದಿಂದ ಬಲಿಯ ದಾನವ ಬೇಡಿ |ಉಕ್ಕಿನ ಕೊಡಲಿಯ ಪಿಡಿದ ಪರಶುರಾಮ || ಮಿಕ್ಕಿದ ತಲೆಯ ಚೆಂಡಾಡಿದ ಶ್ರೀರಾಮ |ಸೊಕ್ಕಿದ ಕಂಸನ ಕೊಲುವೆನೆಂದ ಕೃಷ್ಣ || ಬಲು ಪತಿವ್ರತೆಯರ ವ್ರತವನಳಿದಬುದ್ಧ|ಕಲಿಯಾಗಿ ಖಡಗುವ ಪಿಡಿದು ಕುದುರೆ ಏರಿ || ಒಲಿದು ಭಕ್ತರನೆಲ್ಲ ಸಲಹುವೆನೆಂತೆಂದು |ಚೆಲುವ ಪುರಂದರವಿಠಲ ತೊಟ್ಟಿಲೊಳು ||
Transliteration
Malagi eddanu ranga, makkala manika krushna | Chala hididanu node molekode krushnage ||pa|| Jaladolu tamana mardisi andu matsyanagi | Balugiriya negahi maremadi kurmanagi || Nelana oydavana koluvenemdu varahanagi | Balubaktigagi kambadi narasimhanagi ||1|| Cikka rupadinda baliya danava bedi | Ukkina kodaliya pidida parasurama || Mikkida taleya chendadida srirama | Sokkida kamsana koluvenemda krush…