Haridasa Sahitya — Vyasadasa
Ombattu huvige onde
ಒಂಬತ್ತು ಹೂವಿಗೆ ಒಂದೇ
Composer: Kanakadasaru · Deity: Hari · Genre: Philosophy
Kannada lyrics
ಒಂಬತ್ತು ಹೂವಿಗೆ ಒಂದೇ ನಾಳವು ಚಂದಮಾಮ ||pa|| ತುಂಬಿ ನಾಳತುದಿ ತುಂಬಿ ಭಾನು ಪ್ರಭೆ ಚಂದಮಾಮ||a|| ಕದರು ಗಾತ್ರ ಕಂಬ ತೆಕ್ಕೆಗಾತರ ಹೂವು ಚಂದಮಾಮ ಆನೆಗಾತರ ಕಾಯಿ ಒಂಟೆಗಾತರ ಹಣ್ಣು ಚಂದಮಾಮ ||1|| ಕಾಲಿಲ್ಲದಾತನು ಹತ್ತಿದನು ಮರವನು ಚಂದಮಾಮ ಕೈಯಿಲ್ಲದಾತನು ಕೊಯ್ದನಾ ಹಣ್ಣನು ಚಂದಮಾಮ ||2|| ನೆತ್ತಿಲ್ಲದಾತನು ಹೊತ್ತನು ಹಣ್ಣ ಚಂದಮಾಮ ತಳವಿಲ್ಲದಾ ಗೂಡೆಯಲಿಳಿಸಿದನಾ ಹಣ್ಣ ಚಂದಮಾಮ ||3|| ಮಾರ್ಗ ತಪ್ಪಿ ಮಾರ್ಗ ಹಿಡಿದು ನಡೆದರು ಚಂದಮಾಮ| ಸದ್ದಿಲ್ಲದಾ ಸಂತೇಲಿಳಿಸಿದರಾ ಹಣ್ಣ ಚಂದಮಾಮ ||4|| ರೊಕ್ಕವಿಲ್ಲದಾತ ಕೊಂಡನಾ ಹಣ್ಣ ಚಂದಮಾಮ ಮೂಗಿಲ್ಲದಾತ ಮೂಸಿದನಾ ಹಣ್ಣ ಚಂದಮಾಮ ||5|| ಕಣ್ಣಿಲ್ಲದಾತನು ಕೆಂಪಾನೆ ಹಣ್ಣೆಂದ ಚ…
Transliteration
(raga: nadanamakriya) ombattu huvige onde nalavu chandamama ||pa|| tumbi nalatudi tumbi bhanu prabhe chandamama ||anupa|| kadaru gatra kamba tekkegatra huvu chandamama anegatara kayi omtegatara hannu chandamama ||1|| (raga: kedara) kalilladatanu hattidanu maravanu chandamama kaiyilladatanu koyvana hannanu chandamama ||2|| nettilladatanu hottana hanna chandamama talavillada gudeyalilisidana hanna c…