Haridasa Sahitya — Vyasadasa

Saku saku manuja seveyu

ಸಾಕು ಸಾಕು ಮನುಜಸೇವೆಯು, ರಂಗಯ್ಯ

Composer: Kanakadasaru · Deity: Hari · Genre: Vairagya

Kannada lyrics

ಸಾಕು ಸಾಕು ಮನುಜಸೇವೆಯು, ರಂಗಯ್ಯ ಇನ್ನು ||a|| ಸಾಕು ಸಾಕು ಮನುಜಸೇವೆ ಮಾಡಿ ದಣಿದು ನೊಂದೆ ನಾನು| ಬೇಕು ನಿನ್ನ ಪಾದಭಜನೆ ಕೊಟ್ಟು ಸಲಹೊ ರಂಗಯ್ಯ ||a.pa|| ಹೊತ್ತರೆದ್ದು ಹೋಗಿ ಪರರ ಚಿತ್ತವೃತ್ತಿಯನ್ನು ತಿಳಿದು ಹತ್ತರಿದ್ದು ಹಲವು ಕೆಲಸ ಭೃತ್ಯನಂತೆ ಮಾಡಿ – ರಿಕ್ತಹಸ್ತದಿಂದ ಮನೆಯ ಸೇರುವೆ – ಆಸೆಗಾಗಿಮತ್ತೆ ಕಂಡ ಕಡೆಗೆ ತೊಲಗುವೆ – ಬಂದು ಅಪರರಾತ್ರಿಯಲ್ಲಿ ತಿಂದು ಒರಗುವೆ ರಂಗಯ್ಯ ರಂಗ ||1|| ಸ್ನಾನ ಸಂಧ್ಯಾನುಷ್ಠಾನ ನೇಮವೆಲ್ಲ ತೊರೆದು ಬಿಟ್ಟುಹೀನನಾಗಿ ಕೆಟ್ಟ ಜನರ ಮನೆಗಳನ್ನು ತಿರುಗಿ ತಿರುಗಿಶ್ವಾನನಂತೆ ದಿನವ ಕಳೆವೆನೊ – ದುರಾಸೆಯನ್ನುಮನಸಿನಲ್ಲಿ ಮಡಗಿಕೊಂಡು ಕುದಿವೆನೊಕೊನೆಗೂ ಎಳ್ಳುಕಾಳಿನಷ್ಟು ಸುಖವ ಕಾ…

Transliteration

Saku saku manuja seveyu rangayya innusaku Saku manujaseve madi danidu nonde nanu Beku ninna padabhajane lokadodeya rangaraya Hottareddu hogi parara cittavrittiyanne aritu Nityadalli halavu kelasa Bhrityanante madi Rikta hastadinda manege seruve Asegagi matte kanda kadege tolaguve Bandu apara ratriyalli tindu oraguve rangayya ranga||1|| Snana mouna nitya sandhyana nemagalane toredu Hinanagi ketta j…