Haridasa Sahitya — Vyasadasa

endu kambeno ninna he srinivaasa

ಎಂದು ಕಾಂಬೆನೊ ನಿನ್ನ ಹೇ ಶ್ರೀನಿವಾಸಾ

Composer: Sreedavitthala Dasaru · Deity: Srinivasa / Venkatesha · Genre: Bhakti

Kannada lyrics

ಎಂದು ಕಾಂಬೆನೊ ನಿನ್ನ ಹೇ ಶ್ರೀನಿವಾಸಾ || ಪ || ನಗೆಮೊಗದ ನತಜನ ಬಂಧು ಬಾಬಾರೆನ್ನ ಬಿ - ಟ್ಟಗಲದಲೆ ಮನ ಮಂದಿರದೊಳಿರು ಮುನ್ನಾದರು ಸುಪ್ರಸನ್ನ ಮುಂದೆ ಗತಿ ಏನಯ್ಯ ಮುಕುತರ ಹಿಂದುಳಿದವನಲ್ಲದಲೆ ತನು ಸಂ - ಬಂಧಿಗಳ ವಶನಾಗಿ ದುರ್ವಿಷ - ಯಾಂಧಕಾರದಿ ಮುಳುಗಿದೆನೊ ನಾ || ಅ.ಪ. || ಹಲವು ಜನ್ಮದ ನೋವಾ ನಾ ಹೇಳಿಕೊಳಲೇನೆಲವೊ ದೇವರ ದೇವಾ ನೀ - ನಲ್ಲದಲೆ ಭೂವಲಯದೊಳಿಗಿನ್ನಾವಾ ನಂಬಿದರ ಕಾವ ಸುಲಭರೊಳಗತಿ ಸುಲಭನೆಂಬುವ ಅಲವಬೋಧಮತಾನುಗರು ಎನ - ಗೊಲಿದು ಪೇಳಲು ಕೇಳಿ ನಿಶ್ಚಂ - ಚಲದಿ ನಿನ್ನನೆ ಧೇನಿಸುವೆ ನಾ ಕಲುಷ ಸಂಸ್ಕಾರಗಳ ವಶದಿಂ ಹೊಲಬುಗಾಣದೆ ಹರುಷಗುಂದುವೆ ಹೊಲೆ ಮನದ ಹರಿದಾಟ ತಪ್ಪಿಸಿ ನೆಲೆಗೆ ನಿಲ್ಲಿಸದಿರ್ದ ಬಳಿಕಿನ…

Transliteration

**Pallavi** endu kambeno ninna he srinivaasa pa **Anupallavi** nagemogada natajana bandhu baabaarenna bi - ttagaladale mana mandiradoliru munnaadaru suprasanna munde gati einayya mukutara hindulidavanalladale tanu sam - bandhijala vasanaagi durvisha - yandhakaaradi mulugideno naa a.pa. **Charana 1** halavu janmada nova naa helikolalenelavo devara deva nee - nalladale bhuvalayadoliginnaavaa nambida…