Haridasa Sahitya — Vyasadasa

teraLidaru SrI jagannAthadAsAryaru

ತೆರಳಿದರು ಶ್ರೀ ಜಗನ್ನಾಥದಾಸಾರ್ಯರು

Composer: Sreedavitthala Dasaru · Deity: Sri Jagannatha Dasaru · Genre: Bhakti

Kannada lyrics

ತೆರಳಿದರು ಶ್ರೀ ಜಗನ್ನಾಥದಾಸಾರ್ಯರು ಸಿರಿಪತಿಯ ಸ್ಮರಿಸಿ ಹರಿಪುರಕೆ ಹರುಷದಲಿ ||pa|| ವರಶುಕ್ಲವತ್ಸರದ ಭಾದ್ರಪದ ಶಿತಪಕ್ಷ ಹರಿವಾರ ನವಮಿಯಲ್ಲಿ ಸುರಸಿದ್ಧ ಸಾಧ್ಯ ಸನ್ಮುನಿಗಣಾರ್ಚಿತ ಪಾದ ಹರಿಯೆ ಪರನೆಂದೆನುತಲಿ ಧರಣಿಯನು ತ್ಯಜಿಸಿ ಬಹುಮಾನಪೂರ್ವಕವಾಗಿ ಬೆರೆದು ಸುರಸಂದಣಿಯಲಿ ಪರಮಾರ್ಥವೈದಿ ಮನ ಹರಿಯ ಪಾದದಲಿಟ್ಟು ವರವಿಷ್ಣುದೂತ ವೈಮಾನಿಕರ ಒಡಗೂಡಿ ||1|| ಅತಿಪ್ರೇಮಿಗಳು ಹಸನ್ಮುಖರು ದಯೆ ಬೀರುವರು ಖತಿದೂರರಿವರು ಜಗದೀ ಮಿತಿಮೀರಿ ಶ್ರೀಹರಿಯ ಕಥೆ ನಾನಾ ಪರಿಯಲ್ಲಿ ಅತಿಶಯದಿ ಪೇಳಿ ಇಹಕೆ ಸತತವು ಶರಣರ್ಗೆ ಗತಿಯಾಗುವಂತೆ ಸ ತ್ವಥವಿಡಿಸಿ ಕರುಣದಿಂದ ಹಿತವಂತರೆನಿಸಿ ಸಮ್ಮತವಾಗಿ ಸರ್ವರಿಗೆ ಮತಿದೋರಿ ಕೊಟ್ಟು ಸದ್ಗತಿಯಗೋ…

Transliteration

teraLidaru SrI jagannAthadAsAryaru siripatiya smarisi haripurake haruShadali ||pa|| varaSuklavatsarada BAdrapada SitapakSha harivAra navamiyalli surasiddha sAdhya sanmunigaNArcita pAda hariye paranendenutali dharaNiyanu tyajisi bahumAnapUrvakavAgi beredu surasandaNiyali paramArthavaidi mana hariya pAdadaliTTu varaviShNudUta vaimAnikara oDagUDi ||1|| atiprEmigaLu hasanmuKaru daye bIruvaru KatidUrar…