Haridasa Sahitya — Vyasadasa
Thangi kele
ತಂಗಿ ಕೇಳೆ
Composer: Ambabai · Deity: Vishnu · Genre: Dasara Pada
Kannada lyrics
ತಂಗಿ ಕೇಳೆ ಅತಿಕೌತುಕ ಒಂದು ಸುದ್ಧಿಯ ಸಿಂಗನ ಮೋರೆ ಮಗುವು ಪುಟ್ಟಿ ಮಾಡಿದಾ ಚರ್ಯ||pa|| ತಂದೆ ತಾಯಿಗಳಿಲ್ಲಾದ್ಹಾಂಗೆ ಕಂದ ಪುಟ್ಟಿತು ಬಂಧು ಎತ್ತು ಕೊಂಬೇನೆಂದರೆ ಗುಡು ಗುಡುಗುಟ್ಟಿತೂ ಅಂದ ಛಂದವ ನೋಡೇನೆಂದರೆ ಘೊರಾಕೃತಿಯಾಯ್ತು ತಂದ ತೊಟ್ಟಿಲೊಳಿಟ್ಟೀನೆಂದರೆ ಹೊಸಲೊಳ್ ಕೂತೀತು ||1|| ತೊಡೆಯಲ್ಲಿಟ್ಟು ತಟ್ಟೀನೆಂದರೆ ಕಿಡಿ ಕಿಡಿ ಉಗುಳೀತು ಕಡುಪಾಪಿ ರಕ್ಕಸನ ತನ್ನ ತೊಡೆಯಲ್ಲಿಟ್ಟಿತೂ ಕಡು ಕೋಪದಿಂದಾಲಿ ಅವನ ಒಡಲ ಬಗೆದಿತು. ಎಡಬಲಕೊಬ್ಬರು ಬರದಂತೆ ಆರ್ಭಟಿಸುತಲಿದ್ದಿತು ||2|| ಹಾಲನೆರೆದೆನೆಂದರೆ ರುಧಿರ ಪಾನವ ಮಾಡಿತು ಮಾಲೆ ಹಾಕಿ ಮುದ್ದಿಪನೆನೆ ಕರುಳ್ಮಾಲೆ ಹಾಕೀತು ಮೇಲೆ ಕೇಶ ಕಟ್ಟೀನೆಂದರೆ ಕೆದರಿಕೊಂಡೀತೂ ಬಾಲಲೀ…
Transliteration
Tangi kele atikautuka ondu suddhiyasingana more maguvu putti madida charya ||pa|| Tande tayigalillad~hange kanda puttitu Bandhu ettu kombenendare gudu guduguttitu Anda Chandava nodenendare gorakrutiyaytu Tanda tottilolittinendare hosalol kutitu ||1|| Todeyallittu tattinendare kidi kidi ugulitu Kadupapi rakkasana tanna todeyallittitu Kadu kopadindali avana odala bageditu. Edabalakobbaru baradante a…