Haridasa Sahitya — Vyasadasa
Vanajanayyana manava
ವನಜನಯನನ ಮನವ
Composer: Sripadarajaru · Deity: Vishnu · Genre: Dasara Pada
Kannada lyrics
ವನಜನಯನನ ಮನವ ಮಧುಪ ನಂಬುವರೆಮನದೆಗೆದ ಮದನಪಿತ ವಿಠಲರೇಯಾ ||pa|| ಅರಿಯದ ಬಾಲೇರಿಗೆ ತನ್ನ ಪರಿಯನರುಹಿಸಿ ಮುನ್ನನೆರೆದು ರತಿಪತಿಯ ಸುಖ ನೆರೆದೋರಿದ ತೊರೆದು ಬದುಕುವೆವೆಂತೋ ರತಿಪತಿಯ ಪಿತನಗಲಿವಿರಹದುರಿ ತಾನಳವಡರಿ ಸುಡುತಿಹುದು ||1|| ನಡೆ ನಗೆಯ ತುದಿನೋಟ ಬಲೆಯನೆಮ್ಮೊಳು ಬೀಸಿಬಿಡದೆ ಯೆಮ್ಮನು ತನ್ನ ವಶಮಾಡಿದ ಪಡಿಯಿಲ್ಲದನುಭವದ ಸುಖದ ಸವಿಯನೆ ತೋರಿಮಡದಿ ತಡೆದಳೊ ಮಧುರೆಯಲಿ ನಲ್ಲನ||2|| ಎಂದೆಂದು ನಿಮ್ಮ ವಶದಲ್ಲಿಹೆನೆಂದಭಯವಿತ್ತುಇಂದುಮುಖಿ ನಾರಿಯರ ನೆರೆ ನಂಬಿಸಿ ನಂದನಂದನ ನಮ್ಮ ಕಾನನದೊಳೀಡ್ಯಾಡಿಇಂದು ಮಧುರೆಯ ನಾರಿಯರ ನೆಚ್ಚಿದ ||3|| ಇವನ ವಚನದ ಕಪಟ ತಿಳಿಯಲರಿಯದೆ ನಾವುನವ ಹರಿಣಿಯಂತೆ ಮರುಳಾಗಿ ಕೇಳಿ ವಿವರವರಿ…
Transliteration
Vanajanayanana manava madhupa nambuvare Manadegeda madanapita vithalareya ||pa|| Ariyada balerige tanna pariyanaruhisi munna Neredu ratipatiya suka neredorida Toredu badukuvevento ratipatiya pitanagali Virahaduri tanalavadari sudutihudu ||1|| Nade nageya tudinota baleyanemmolu bisi Bidadeyemmanu tanna vasamadida Padiyilladanubavada sukada saviyane tori Madadi tadedalo madhureyali nallana ||2|| End…